Sunday, September 19, 2021
Homeರಾಜಕೀಯಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದು, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಇಂದು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥಸಿಂಗ್, ಪ್ರಹ್ಲಾದ ಜೋಶಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಕೇಂದ್ರದಲ್ಲಿರುವ ರಾಜ್ಯದ ಐವರು ಸಚಿವರ ಜೊತೆಗೆ ಪ್ರಧಾನಿಯವರನ್ನು ಭೇಟಿ ಮಾಡಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ನಾಯಕರ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮವಾಗಿ ಆಡಳಿತ ನಡೆಸಿ, ಪಕ್ಷ, ಜನರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ನಡೆಯಲಿ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ, ರಾಜ್ಯದ ಯೋಜನೆಗಳಿಗೆ ಸಹಾಯ ಹಸ್ತ ಚಾಚುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಮೋದಿ ಸಹಕಾರದ ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಕೇಂದ್ರದ ಯೋಜನೆಗಳನ್ನು ಜನರಿಗೆ ಮುಟ್ಟಿಸಬೇಕು. ಮುಂದಿನ ಚುನಾವಣೆಗಳಿಗೆ ಸಿದ್ಧರಾಗಿರಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಗ್ರಾಮೀಣ ಪ್ರದೇಶ ಮತ್ತು ರೈತರಿಗಾಗಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಜಾರಿಗೆ ತಂದ ಯೋಜನೆಗಳನ್ನು ಯಶಸ್ವಿಗೊಳಿಸುವಲ್ಲಿ ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯದ ಸಹಕಾರದೊಂದಿಗೆ ಯೋಜನೆ ಜನರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img