Wednesday, September 22, 2021
Homeರಾಜಕೀಯಮೇಕೆದಾಟು ಯೋಜನೆ ಬಗ್ಗೆ ಸಿಎಂ ಚರ್ಚೆ

ಇದೀಗ ಬಂದ ಸುದ್ದಿ

ಮೇಕೆದಾಟು ಯೋಜನೆ ಬಗ್ಗೆ ಸಿಎಂ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರದ ಅನೇಕ ಸಚಿವರ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿಗಳು ಮೇಕೆದಾಟು ಅಣೆಕಟ್ಟು ವಿಚಾರ ಸೇರಿದಂತೆ ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ವರದಿಯಾಗಿದೆ.

ಈ ವಿಚಾರವಾಗಿ ಮಾತನಾಡಿರುವ ಲೋಕಸಭೆ ಸಂಸದ ತೇಜಸ್ವಿ ಸೂರ್ಯ, ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಎಲ್ಲ ಸಂಸದರ ನಿಯೋಗ ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​​ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ ನೀರಾವರಿ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img