Sunday, September 19, 2021
Homeಜಿಲ್ಲೆಶಿವಮೊಗ್ಗಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

ಇದೀಗ ಬಂದ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

28 ಜನ ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಕಾಸ್ಪಾಡಿ ಬಳಿ ನಡೆದಿದೆ.

ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎದುರುಗಡೆ ಬಂದ ಬೈಕ್ ತಪ್ಪಿಸಲೆಂದು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಬಸ್ ನ್ನು ಸ್ವಲ್ಪ ತಿರುಗಿಸುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಲ್ಲದೇ ಕೆರೆಗೆ ಉರುಳಿದೆ.

ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img