Saturday, September 18, 2021
HomeದೆಹಲಿCBSE 12ನೇ ತರಗತಿ ಫಲಿತಾಂಶ: ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ

ಇದೀಗ ಬಂದ ಸುದ್ದಿ

CBSE 12ನೇ ತರಗತಿ ಫಲಿತಾಂಶ: ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ

ನವದೆಹಲಿ: ಬಹು ನಿರೀಕ್ಷಿತ ಸಿಬಿಎಸ್​ಇ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹೇಳಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್​​ಸೈಟ್​​ ನೋಡಬಹುದಾಗಿದೆ.

ಸಿಬಿಎಸ್​ಇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಹಿಂದೆಯೇ ಪ್ರಕಟಿಸಬೇಕಿತ್ತು. ಶಾಲೆಗಳ ಜೊತೆಗೆ ಮಂಡಳಿಯು ದತ್ತಾಂಶ ಒಟ್ಟು ಸೇರಿಸಲು ತಡವಾದ ಕಾರಣ ಮುಂದೂಡಲಾಗಿತ್ತು. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಿಬಿಎಸ್‌ಇ ತಿಳಿಸಿತ್ತು.

ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ 12ನೇ ತರಗತಿಯ ಫಲಿತಾಂಶ ನೀಡಲಿದ್ದೇವೆ. ಯಾವುದೇ ಕಾರಣಕ್ಕೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲ್ಲ. ಈ ವರ್ಷ ಕೋವಿಡ್​​ ಕಾರಣದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆದರೆ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಕೋನದಿಂದ ಯಾರಿಗೂ ತೊಂದರೆ ಆಗದಂತೆ ನ್ಯಾಯಯುತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡುತ್ತಿದ್ದೇವೆ ಎಂದು ಸಿಬಿಎಸ್​ಇ ಮಂಡಳಿ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img