Wednesday, September 22, 2021
Homeಸುದ್ದಿ ಜಾಲಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ; ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ

ಇದೀಗ ಬಂದ ಸುದ್ದಿ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ; ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ

ಚೆನ್ನೈ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ.

ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ನಿಲ್ಲಿಸಲ್ಲ, ಡ್ಯಾಂ ನಿರ್ಮಾಣ ಮಾಡುವುದಾಗಿ ತಿಳಿಸಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅಣ್ಣಾಮಲೈ ಕರ್ನಾಟಕ ನೂತನ ಸಿಎಂ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ತಮಿಳುನಾಡಿಗೆ ಈ ಯೋಜನೆಯಿಂದ ತೊಂದರೆಯಾಗಲಿದೆ ಈ ಹಿನ್ನೆಲೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ಆಗಸ್ಟ್ 5ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಮೇಕೆದಾಟು ಯೋಜನೆ ಕುರಿತಂತೆ ನಾವು ರಾಜಕೀಯ ಮಾಡಿಲ್ಲ, ತಮಿಳುನಾಡು ಬಿಜೆಪಿ, ತಮಿಳುನಾಡು ಸರ್ಕಾರದ ಜೊತೆಗೆ ನಿಲ್ಲುತ್ತೆ ಎಂದಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img