Thursday, September 23, 2021
Homeಕೋವಿಡ್-19ದೇಶದಲ್ಲಿ ಮತ್ತೆ 41,649 ಮಂದಿಗೆ ಕೊರೊನಾ

ಇದೀಗ ಬಂದ ಸುದ್ದಿ

ದೇಶದಲ್ಲಿ ಮತ್ತೆ 41,649 ಮಂದಿಗೆ ಕೊರೊನಾ

ನವದೆಹಲಿ, ಜು.31- ದೇಶದಲ್ಲಿ ಮತ್ತೆ 41,649 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 3,16,13,993 ಕೋಟಿಗೆ ಏರಿಕೆಯಾಗಿದೆ. ನಿನ್ನೆಯಿಂದ ಮಹಾಮಾರಿಗೆ 593 ಮಂದಿ ಬಲಿಯಾಗಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 4,23,810 ಲಕ್ಷಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಕಳೆದ 4 ದಿನಗಳಿಂದ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ವರದಿಯಲ್ಲಿ ಬಹಿರಂಗಗೊಂಡಿದೆ.
ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.37ಕ್ಕೆ ಹೆಚ್ಚಳಗೊಂಡಿವೆ. ದಿನದ ಪಾಸಿಟಿವಿಟಿ ರೇಟ್ ಶೇ.2.34ರಲ್ಲಿ ಸೀಮಿತಗೊಂಡಿದ್ದರೆ, ವಾರದ ಪಾಸಿಟಿವಿಟಿ ದರ ಶೇ.2.42ರಷ್ಟಿದೆ.

3.16 ಕೋಟಿ ಸೋಂಕಿತರ ಪೈಕಿ ಈಗಾಗಲೇ 3.8 ಕೋಟಿಯಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಮಾಣ ಶೇ.1.34ರಷ್ಟಿದೆ. ದೇಶದಲ್ಲಿ ಲಸಿಕೆ ಹಾಕುವ ಪ್ರಮಾಣ ದಿನೇ ದಿನೇ ಹೆಚ್ಚಳಗೊಳ್ಳುತ್ತಿದ್ದು, ಇಂದು ಮುಂಜಾನೆಯವರೆಗೆ 46.15 ಕೋಟಿಯಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img