Wednesday, September 22, 2021
Homeದೆಹಲಿಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಇದೀಗ ಬಂದ ಸುದ್ದಿ

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್​ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಸೇರಿ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ರಾಜ್ಯ ಅಭಿವೃದ್ಧಿ ವಿಚಾರಗಳ ಸಂಬಂಧ ವಿವಿಧ ಸಚಿವರ ಜತೆ ಮಾತುಕತೆ ನಡೆಸುತ್ತಿದ್ದಾರೆ.

ಈ ಹಿಂದೆ ಸಿಎಂ ಆಗಿದ್ದ ಬಿ.ಎಸ್. ಯಡಿಯೂರಪ್ಪ ಕೂಡ ಹಲವು ಬಾರಿ ಜಿಎಸ್​ಟಿ ಹಣ ಬಿಡುಗಡೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಇದೀಗ ನೂತನ ಸಿಎಂ ಬೊಮ್ಮಾಯಿ ಕೂಡ ಅದೇ ಹಾದಿ ಹಿಡಿದಿದ್ದಾರೆ. ಮೋದಿ ಸರ್ಕಾರ ಈಗಲಾದರೂ, ಸರ್ಕಾರಕ್ಕೆ ಬರಬೇಕಿದ್ದ ಜಿಎಸ್​ಟಿ ಪಾಲು ನೀಡುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img