Sunday, September 19, 2021
Homeಸುದ್ದಿ ಜಾಲಸೆಪ್ಟೆಂಬರ್‌ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

ಇದೀಗ ಬಂದ ಸುದ್ದಿ

ಸೆಪ್ಟೆಂಬರ್‌ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

ನವದೆಹಲಿ: ದೇಶದಲ್ಲಿ ಸಾಂಕ್ರಾಮಿಕ ಕೋವಿಡ್‌-19 ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ವಿಸ್ತರಿಸಿದೆ.

ವಾಣಿಜ್ಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧಗಳು ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರುತ್ತವೆ. ಆದರೆ ಸರಕು ವಿಮಾನಗಳ ಸೇವೆ ಎಂದಿನಂತೆ ಮುಂದುವರಿಯಲಿದೆ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ನಿರ್ಬಂಧಿತ ವಾಯು ಮಾರ್ಗಗಳಲ್ಲಿ ಅಧಿಕಾರಿಗಳು ಅನುಮೋದಿಸಿದ ಅಂತಾರಾಷ್ಟ್ರೀಯ ವಿಮಾನಗಳಿಗೆ ಈ ನಿರ್ಬಂಧಗಳಿಂದ ವಿನಾಯಿತಿ ಇದೆ.

ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧಗಳನ್ನು 2021ರ ಜುಲೈ 31 ರಂದು ಕೊನೆಗೊಳಿಸಲು ನಿರ್ಧರಿಸಲಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜುಲೈ 30 ರಿಂದ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಅವಧಿಯನ್ನೂ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ. 2020ರ ಮಾರ್ಚ್‌ 23 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img