Wednesday, September 22, 2021
Homeರಾಜಕೀಯಸಿದ್ದರಾಮಯ್ಯ ಮತ್ತು ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್: ಶ್ರೀರಾಮುಲು

ಇದೀಗ ಬಂದ ಸುದ್ದಿ

ಸಿದ್ದರಾಮಯ್ಯ ಮತ್ತು ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್: ಶ್ರೀರಾಮುಲು

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕೇವಲ ಪೋಟೋ ಫ್ರೆಂಡ್ಸ್. ದೆಹಲಿಗೆ ಹೋದಾದ ಮಾತ್ರ ಒಂದಾಗಿರುತ್ತಾರೆ. ರಾಹುಲ್, ಸೋನಿಯಾ, ಪ್ರಿಯಾಂಕ ಗಾಂಧಿ ಎದುರು ಕೈ ಕೈ ಕುಲಾಯಿಸುತ್ತಾರೆ. ಆದರೆ ಹೊರಗಡೆ ಇಬ್ಬರ ಮಧ್ಯೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ಇದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಹು-ಧಾ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದರು.

ಹುಬ್ಬಳ್ಳಿ ತಗ್ಗು-ಗುಂಡಿಗಳ ನಗರ ಎಂಬ ಡಿಕೆಶಿ ಹೇಳಿಕೆ ವಿಚಾರವು, ಅವರು ಕನಕಪುರದಿಂದ ಬಂದವರು. ಪ್ರಹ್ಲಾದ ಜೋಶಿ, ಜಗದೀಶ ಶೆಟ್ಟರ ಅಭಿವೃದ್ಧಿ ಮಾಡಿದ್ದಾರೆ. ಕಾಂಗ್ರೆಸ್ ಹಗಲುಕನಸು ಕಾಣುತ್ತಿದ್ದಾರೆ. ಎಲ್ಲಾ ಚುನಾವಣೆಯಲ್ಲಿ ಕೈ ನಾಯಕರು ನಾವೇ ಗೆಲ್ಲುತ್ತೇವೆ ಎನ್ನುತ್ತಾರೆ. ಆದರೆ ಎಲ್ಲೂ ಗೆದ್ದಿಲ್ಲ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img