Wednesday, September 22, 2021
Homeರಾಜಕೀಯಡಿಕೆಶಿಗೆ ಓಪನ್ ಚಾಲೆಂಜ್ ಹಾಕಿದ ಶಾಸಕ ಬೆನಕೆ

ಇದೀಗ ಬಂದ ಸುದ್ದಿ

ಡಿಕೆಶಿಗೆ ಓಪನ್ ಚಾಲೆಂಜ್ ಹಾಕಿದ ಶಾಸಕ ಬೆನಕೆ

ಬೆಳಗಾವಿ: ಸ್ಮಾರ್ಟ್​ ಸಿಟಿ ಯೋಜನೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಬಿಜೆಪಿ ಶಾಸಕ ಅನಿಲ ಬೆನಕೆ ಸವಾಲು ಹಾಕಿದ್ದಾರೆ.

ಕೇಂದ್ರ ಸರ್ಕಾರ ಸುರೇಶ್ ಅಂಗಡಿಯವರನ್ನ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಯಿತು ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಬೆನಕೆ, ಸುರೇಶ್​ ಅಂಗಡಿ ಕೊರೊನಾದಿಂದ ಮೃತಪಟ್ಟು ಒಂದು ವರ್ಷವಾಯಿತು. ಒಂದು ವರ್ಷದಿಂದ ಇವರು ಯಾಕೆ ಬಾಯಿ ಮುಚ್ಚಿಕೊಂಡಿದ್ರು. ನಮ್ಮ ಹಿರಿಯ ನಾಯಕರ ಬಗ್ಗೆ ನಮಗೆ ಗೌರವಿದೆ. ಕೋವಿಡ್​ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸಂಬಂಧಿಕರ ಕೈಗೆ ಹಸ್ತಾಂತರಿಸಬಾರದೆಂಬ ನಿಯಮವಿತ್ತು. ಒಂದು ವೇಳೆ ನಾವು ಮೃತದೇಹವನ್ನು ಅಂದು ಕುಟುಂಬಕ್ಕೆ ಹಸ್ತಾಂತರಿಸಿದ್ದರೆ, ಇವರೇ ಉಲ್ಟಾ ಮಾತನಾಡುತ್ತಿದ್ರು ಎಂದು ವಾಗ್ದಾಳಿ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಆದಾಗ ಎರಡು ವರ್ಷ ನೀವು ಏಕೆ ಕೆಲಸ ಮಾಡಲಿಲ್ಲ. ನಾವು ಶಾಸಕರಾಗಿ ಆಯ್ಕೆಯಾದ ಮೇಲೆ ಕೆಲಸ ಶುರು ಮಾಡಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಶಾಸಕರು, ಸಂಸದರು ಯಾರ್ ಬೇಕಾದ್ರು ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶಾಸಕ ಅನಿಲ್ ಬೆನಕೆ ಓಪನ್ ಚಾಲೆಂಜ್ ಹಾಕಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img