Wednesday, September 22, 2021
Homeಸುದ್ದಿ ಜಾಲರಾಜ್ಯದಲ್ಲಿ 1ನೇ ತರಗತಿ ಆರಂಭದ ಬಗ್ಗೆ ಸಂಜೆ ನಿರ್ಧಾರ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 1ನೇ ತರಗತಿ ಆರಂಭದ ಬಗ್ಗೆ ಸಂಜೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ 1 ರಿಂದ 8ನೇ ತರಗತಿ ಆರಂಭಿಸೋದಕ್ಕೆ ಶಿಕ್ಷಣ ಇಲಾಖೆ ಸಿದ್ಧವಿದೆ. ಆದ್ರೇ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಬೇಕು. ಮುಖ್ಯಮಂತ್ರಿಗಳ ನಿರ್ಧಾರ ಮೇಲೆ ಶಾಲೆಗಳ ಪುನರಾರಂಭದ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮೆಲ್ಲಾ ಶಿಕ್ಷಕರು ಶಾಲೆ ಆರಂಭ ಮಾಡಲು ಉತ್ಸುಕರಾಗಿದ್ದಾರೆ. ಒಂದರಿಂದ 8ನೇ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಕೂಡ ಸಿದ್ಧವಿದೆ. ಈ ಬಗ್ಗೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಇಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮಹತ್ವದ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ 1 ರಿಂದ 8ನೇ ತರಗತಿ ಶಾಲೆಗಳ ಆರಂಭ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ನಮ್ಮೆಲ್ಲಾ ಸಚಿವರು, ಶಾಸಕರು, ಪೋಷಕರು ಸಹ ಶಾಲಾ ಆರಂಭಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಆದ್ರೇ ಈ ಬಗ್ಗೆ ಇಂದು ಸಂಜೆ ನಡೆಯುತ್ತಿರುವಂತ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img