Wednesday, September 22, 2021
Homeರಾಜಕೀಯಕಾಂಗ್ರೆಸ್‌ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಇದೀಗ ಬಂದ ಸುದ್ದಿ

ಕಾಂಗ್ರೆಸ್‌ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಕಲಬುರಗಿ: ಕೋವಿಡ್‌ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ಕೊಡೋದು ನನ್ನ ಜವಾಬ್ದಾರಿ. ಜನರು ಸಂಕಷ್ಟದಲ್ಲಿರೋ ಕಾರಣ ಆಡಳಿತ ಪಕ್ಷಕ್ಕೆ ಸಹಕಾರ ಕೊಡಲೇಬೇಕು, ಇದನ್ನ ಬಿಟ್ಟು ನಾನು ಬಿಜೆಪಿ ಬಗ್ಗೆ ಯಾವತ್ತು ಸಾಫ್ಟ್ ಕಾರ್ನರ್ ಆಗೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಮಾಡಿದ ಅವರು, ಬಿಜೆಪಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಕೋವಿಡ್‌ ಸಂದರ್ಭದಲ್ಲಿ ನಾನು ಸರ್ಕಾರಕ್ಕೆ ಸಹಕಾರ ನೀಡಿದ್ದೇನೆ. ಜನರು ಸಂಕಷ್ಟದಲ್ಲಿರೋ ಕಾರಣ ಆಡಳಿತ ಪಕ್ಷಕ್ಕೆ ಸಹಕಾರ ಕೊಡಲೇಬೇಕಿರುವುದು ನನ್ನ ಜವಾಬ್ದಾರಿಯಾಗಿತ್ತು. ಇದನ್ನ ಬಿಟ್ಟು ನಾನು ಬಿಜೆಪಿ ಬಗ್ಗೆ ಯಾವತ್ತು ಸಾಫ್ಟ್ ಕಾರ್ನರ್ ಆಗೋದಿಲ್ಲ. ಮೈಸೂರು ಪಾಲಿಕೆಯಲ್ಲಿ ನಾವು ಅವಕಾಶವಾದಿ ರಾಜಕಾರಣ ನಡೆಸಿಲ್ಲ. ಅಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿಗೆ ಸಿದ್ಧವಿರಲಿಲ್ಲ‌‌. ನಮ್ಮ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಬೆಂಬಲಿಸಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ 42 ಅಭ್ಯರ್ಥಿಗಳು ಜೆಡಿಎಸ್ ಪಕ್ಷದಿಂದ ಕಣದಲ್ಲಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಭರಾಟೆಯ ಪ್ರಚಾರದಲ್ಲಿ ತೊಡಗಿವೆ. ಈ ಚುನಾವಣೆ ಮುಖಾಂತರ ಕಲಬುರಗಿಯಲ್ಲಿ ಜೆಡಿಎಸ್ ಅಧಿಕಾರ ನಡೆಸುತ್ತೆ. ನಗರದಲ್ಲಿ ಸಾಕಷ್ಟು ಮೂಲಭೂತ ಸಮಸ್ಯೆಗಳು ಜನರನ್ನ ಕಾಡುತ್ತಿವೆ. ನಾನು ಸಿಎಂ ಆಗಿದ್ದಾಗ ಉತ್ತರ ಕರ್ನಾಟಕದ ನೀರಿನ ಸಮಸ್ಯೆಯನ್ನ ಬಗೆಹರಿಸಿದ್ದೇನೆ. ಪ್ರವಾಹದಿಂದ ತತ್ತರಿಸಿದ ಜನರಿಗೆ ಇದುವರೆಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್‌ನವರು ಪ್ರತಿದಿನ ಭ್ರಷ್ಟಾಚಾರದ ಬಗ್ಗೆನೇ ಚರ್ಚಿಸುತ್ತಾರೆ. ಆದರೆ ಅವರ ಅಧಿಕಾರದ ಅವಧಿಯಲ್ಲೇ ಸಾಕಷ್ಟು ಭ್ರಷ್ಟಾಚಾರ ಆಗಿದೆ. ಪಾಲಿಕೆ ಚುನಾವಣೆಯಲ್ಲಿ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುತ್ತೇವೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img