Sunday, September 19, 2021
Homeಜಿಲ್ಲೆಬೆಂಗಳೂರುಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿದವರಿಗೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತರಬೇತಿ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ದಿನಾಂಕ: 07.09.2021 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img