Wednesday, September 22, 2021
Homeರಾಜಕೀಯದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ

ಇದೀಗ ಬಂದ ಸುದ್ದಿ

ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ

ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸಹಾಯಕರಾಗಿ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಬಂಧನ ಮಾಡಿದೆ‌.‌ ಎನ್‌ಐಎ ಜೊತೆ ನಮ್ಮ ಪೊಲೀಸರು ಸೇರಿಕೊಂಡ ಕೆಲಸ ಮಾಡುತ್ತಿದ್ದಾರೆ ಎಂದರು.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಬಳಿಕ ದಾವಣಗೆರೆಗೆ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಸಿಎಂ ತಿಳಿಸಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು‌ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ‌ ನೀಡಲು ಕೇಳಿದ್ದೇವೆ. ಸೆಪ್ಟೆಂಬರ್ 5ರಂದು ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img