Sunday, September 19, 2021
Homeಸುದ್ದಿ ಜಾಲಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಹೊರಬೀಳಲಿದೆ ಮಹತ್ವದ ನಿರ್ಧಾರ

ಇದೀಗ ಬಂದ ಸುದ್ದಿ

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಹೊರಬೀಳಲಿದೆ ಮಹತ್ವದ ನಿರ್ಧಾರ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನ 3ನೇ ಅಲೆ ಭೀತಿ ಮಧ್ಯೆ ಗೌರಿ-ಗಣೇಶ ಹಬ್ಬ ಬಂದಿದ್ದು, ಈ ಹಬ್ಬವನ್ನ ರಾಜ್ಯದ ಜನರು ಯಾವ ರೀತಿಯಾಗಿ ಆಚರಣೆ ಮಾಡಬೇಕು ಎಂಬುದರ ಕುರಿತು ಇಂದು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಹೊರಬೀಳಲಿದೆ.

ಈಗಾಗಲೇ ಗಣೇಶೋತ್ಸವ ಆಚರಣೆಗೆ ಬಿಜೆಪಿ ಮುಖಂಡರೇ ಒತ್ತಾಯಿಸಿದ್ದಾರೆ. ಹೀಗಾಗಿ, ಕೆಲ ನಿರ್ಬಂಧ ವಿಧಿಸಿ ಅನುಮತಿ ನೀಡಲೂಬಹುದು ಎನ್ನಲಾಗ್ತಿದೆ. ಕೋವಿಡ್ ಹಿನ್ನೆಲೆ ಅನುಮತಿ ನೀಡಬೇಕೇ? ಬೇಡವೇ? ಎಂಬ ಗೊಂದಲದಲ್ಲಿ ಸರ್ಕಾರ ಇದೆ. ಷರತ್ತುಬದ್ಧ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲು ಸರ್ಕಾರ ಪ್ಲಾನ್ ಮಾಡಲಿದೆ ಎಂದು ಹೇಳಲಾಗಿದೆ. ಸಾರ್ವಜನಿಕ ಗಣೇಶೋತ್ಸವದ ಬೇಕು-ಬೇಡಗಳ ಬಗ್ಗೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಭಕ್ತಾದಿಗಳು ಹಾಗೂ ತಜ್ಞರ ಸಲಹೆಗಳ ನಡುವೆ ಸಿಲುಕಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೆಲ ಷರತ್ತುಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೂಡ ಗಣೇಶೋತ್ಸವ ಆಚರಣೆಗೆ ಅನುಮತಿ ಹಾಗೂ ವಾರಾಂತ್ಯದ ಕರ್ಫ್ಯೂ ಹಿಂಪಡೆದುಕೊಳ್ಳುವ ವಿಚಾರವಾಗಿ ಸುದೀರ್ಘವಾದ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್​​ ನಿಯಂತ್ರಣದಲ್ಲಿರುವ ಕಾರಣ ಹಾಗೂ ಸರ್ಕಾರದ ಮೇಲೆ ಹೆಚ್ಚಿನ ಒತ್ತಡವಿರುವ ಕಾರಣ ಕೆಲವೊಂದು ನಿರ್ಬಂಧ ವಿಧಿಸಿ, ಸಾರ್ವಜನಿಕ ಹಬ್ಬ ಆಚರಣೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ಜೊತೆಗೆ ಕಳೆದ ವರ್ಷಕ್ಕಿಂತಲೂ ನಿರ್ಬಂಧಗಳು ಸಡಲಿಕೆಯಾಗುವ ಸಾಧ್ಯತೆ ಇದೆ. ಆದರೆ ದೊಡ್ಡ ಮಟ್ಟದ ಉತ್ಸವಗಳಿಗೆ ಅನುಮತಿ ನೀಡುವುದು ಸಾಧ್ಯವಿಲ್ಲ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img