Wednesday, September 22, 2021
Homeಕೋವಿಡ್-19ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,875 ಕೋವಿಡ್ ಪ್ರಕರಣ ಪತ್ತೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,875 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 37,875 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 369 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆ.08) ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ 3,91,256 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರೊಂದಿಗೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,30,96,718ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 369 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 4,41,411 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 24ಗಂಟೆಗಳಲ್ಲಿ 39,114 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ 3,22,64,051 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಕಳೆದ ಒಂದೇ ದಿನದಲ್ಲಿ 37,875 ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದ್ದು, ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,91,256ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img