Wednesday, September 22, 2021
Homeರಾಜಕೀಯದೆಹಲಿ ಸಿಎಂ ಪ್ರವಾಸ: ಸಂಪುಟ ವಿಸ್ತರಣೆ ಮಾತುಕತೆ ನಡೆದಿಲ್ಲ

ಇದೀಗ ಬಂದ ಸುದ್ದಿ

ದೆಹಲಿ ಸಿಎಂ ಪ್ರವಾಸ: ಸಂಪುಟ ವಿಸ್ತರಣೆ ಮಾತುಕತೆ ನಡೆದಿಲ್ಲ

ಬೆಂಗಳೂರು: ಎರಡು ದಿನಗಳ ದೆಹಲಿ ಪ್ರವಾಸವು ಬಹಳ ಫಲಪ್ರದವಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಆರ್​.ಟಿ.ನಗರದ ನಿವಾಸದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಉಪನಗರ ರಿಂಗ್ ರೋಡ್ ದಾಬಸ್ ಪೇಟೆಯಿಂದ ಹೊಸೂರುವರೆಗೆ ಭಾರತ್ ಮಾಲಾ ಮೊದಲನೇ ಯೋಜನೆಯಡಿ ಕೈಗೊಳ್ಳಲಾಗಿದೆ. ಅದರ ಭೂಸ್ವಾಧೀನ ವಿಚಾರದಲ್ಲಿದ್ದ ವಿವಾದವನ್ನು ಪರಿಹರಿಸಲಾಗಿದೆ.

ಆರು ತಿಂಗಳ ಒಳಗಾಗಿ ರಸ್ತೆ ನಿರ್ಮಾಣ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ಬಿಜಾಪುರ ಸಂಕೇಶ್ವರ ಹೈವೇ ವಿಸ್ತರಣೆಗೆ ಒಪ್ಪಿಕೊಂಡಿದ್ದಾರೆ. ಡಿಪಿಆರ್ ನಡೆಯುತ್ತಿದ್ದು, ಇದರೊಂದಿಗೆ ಇನ್ನೂ ನಾಲ್ಕು ಹೆದ್ದಾರಿಗಳನ್ನು ಭಾರತ್ ಮಾಲಾ ಎರಡನೇ ಹಂತದಲ್ಲಿ ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದರು.

ಶಿರಾಡಿಘಾಟ್ ರಸ್ತೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಶಿರಾಡಿಘಾಟ್​​ನಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಅದನ್ನು ಕೂಡ ಮಾಡಿಕೊಡುವುದಾಗಿ ಗಡ್ಕರಿ ಭರವಸೆ ಕೊಟ್ಟಿದ್ದಾರೆ. ಚತುಷ್ಪಥ ಮಾರ್ಗ ನಿರ್ಮಾಣದ ಬಗ್ಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img