Wednesday, September 22, 2021
Homeರಾಜಕೀಯನನ್ನದು ಕಾಶ್ಮೀರಿ ಪಂಡಿತ ಕುಟುಂಬ: ರಾಹುಲ್ ಗಾಂಧಿ

ಇದೀಗ ಬಂದ ಸುದ್ದಿ

ನನ್ನದು ಕಾಶ್ಮೀರಿ ಪಂಡಿತ ಕುಟುಂಬ: ರಾಹುಲ್ ಗಾಂಧಿ

“ನಾನು ಮನೆಗೆ ಬಂದಿದ್ದೇನೆ ಎನ್ನುವ ಅನುಭವ ಆಗುತ್ತಿದೆ. ನನ್ನ ಕುಟುಂಬವು ಜಮ್ಮು ಮತ್ತು ಕಾಶ್ಮೀರದೊಂದಿಗೆ ಸುದೀರ್ಘ ಸಂಬಂಧ ಹೊಂದಿದೆ “ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶುಕ್ರವಾರ (ಸೆ.10) ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಹುಲ್, “ನಾನು ಕಾಶ್ಮೀರಿ ಪಂಡಿತ ಮತ್ತು ನನ್ನದು ಕಾಶ್ಮೀರಿ ಪಂಡಿತ್ ಕುಟುಂಬ. ಇಂದು ಬೆಳಿಗ್ಗೆ ಕಾಶ್ಮೀರಿ ಪಂಡಿತರ ನಿಯೋಗವು ನನ್ನನ್ನು ಭೇಟಿ ಮಾಡಿತು. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಬಿಜೆಪಿ ಏನೂ ಮಾಡಿಲ್ಲ ಎಂದು ಅವರು ನನಗೆ ತಿಳಿಸಿದರು ಎಂದು ರಾಹುಲ್ ಗಾಂಧಿ ಹೇಳಿದರು.

“ನನ್ನ ಕಾಶ್ಮೀರಿ ಪಂಡಿತ್ ಸಹೋದರರಿಗೆ ನಾನು ಏನಾದರೂ ಮಾಡುವುದಾಗಿ ಭರವಸೆ ನೀಡುತ್ತೇನೆ” ಎಂದು ರಾಹುಲ್ ಗಾಂಧಿ ನುಡಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ ಆದರೆ, ನನಗೆ ತುಂಬಾ ನೋವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಳ್ಳೆಯ ಬ್ರಾತೃತ್ವದ ಸಂಬಂಧ ಇದೆ. ಆದರೆ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಈ ಬಂಧವನ್ನು ಮುರಿಯಲು ಪ್ರಯತ್ನಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img