Wednesday, September 22, 2021
Homeರಾಜಕೀಯಗಣಿಗಾರಿಕೆ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇನೆ: ರವೀಂದ್ರ

ಇದೀಗ ಬಂದ ಸುದ್ದಿ

ಗಣಿಗಾರಿಕೆ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇನೆ: ರವೀಂದ್ರ

ಮಂಡ್ಯ: ಕಲ್ಲು ಗಣಿಗಾರಿಕೆ ಸ್ಥಗಿತದಿಂದಾಗಿ 3 ತಿಂಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಈ ವಿಚಾರವನ್ನ ಸದನದಲ್ಲಿ ಗಂಭೀರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಗಣಿಗಾರಿಕೆ ಸ್ಥಗಿತಗೊಂಡು 3 ತಿಂಗಳಾಗಿವೆ. ಅಂದಿನಿಂದ ಜಿಲ್ಲೆಯ ಅಭಿವೃದ್ಧಿಯೂ ಕುಂಠಿತವಾಗಿದೆ. ಇದು ಸರ್ಕಾರದ ಗಮನಕ್ಕೆ ಇದೆಯೋ, ಇಲ್ಲವೋ ಗೊತ್ತಿಲ್ಲ. ಇದರ ಹೊಣೆಯನ್ನು ಯಾರು ಹೊರುತ್ತಾರೆ ಅನ್ನೋ ಕ್ಲಾರಿಟಿ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ, ಗಣಿ ಸಚಿವರು ಇದರ ಬಗ್ಗೆ ಗಮನಹರಿಸಿಲ್ಲ. ಸಾಮಾನ್ಯ ಜನ, ಮನೆ ಹಾಗೂ ಶೌಚಾಲಯ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣರಾದವರು ಉತ್ತರ ಕೊಡಬೇಕು ಎಂದರು.

ವಿಧಾನಸಭೆಯಲ್ಲಿ ಇದರ ಬಗ್ಗೆ ಪ್ರಶ್ನೆ ಎತ್ತಲು ಸಿದ್ಧ. ಇದರ ಬಗ್ಗೆ ಗಂಭೀರವಾಗಿ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಇಲ್ಲದ ಕಾನೂನು ಮಂಡ್ಯಕ್ಕೆ ಮಾತ್ರ ತರಲಾಗಿದೆ. ಜಿಲ್ಲೆಯ ಜೆಡಿಎಸ್ ಶಾಸಕರನ್ನು ಕುಗ್ಗಿಸಬೇಕು ಅಂದುಕೊಂಡಿದ್ದರೆ, ಇದಕ್ಕೆ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತೆ ಎಂದು ಕಿಡಿಕಾರಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img