Sunday, September 19, 2021
Homeರಾಜಕೀಯಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕಾ ತಿಬ್ರೆವಾಲಾ ಮಮತಾ ವಿರುದ್ಧ ಕಣಕ್ಕೆ

ಇದೀಗ ಬಂದ ಸುದ್ದಿ

ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕಾ ತಿಬ್ರೆವಾಲಾ ಮಮತಾ ವಿರುದ್ಧ ಕಣಕ್ಕೆ

ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದ ಪ್ರಿಯಾಂಕಾ ಟಿಬ್ರೆವಾಲ್ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img