Sunday, September 19, 2021
Homeರಾಜಕೀಯಸಚಿವ ಆರ್‌.ಅಶೋಕ್‌ ಭೇಟಿ ವಿಚಾರ: ಹೆಚ್‌ಡಿಕೆ ಟ್ವೀಟ್‌

ಇದೀಗ ಬಂದ ಸುದ್ದಿ

ಸಚಿವ ಆರ್‌.ಅಶೋಕ್‌ ಭೇಟಿ ವಿಚಾರ: ಹೆಚ್‌ಡಿಕೆ ಟ್ವೀಟ್‌

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು. ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದಿದ್ದಾರೆ.

ಪ್ರಸ್ತುತ, ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಕಲಬುರಗಿ ಪಾಲಿಕೆ ಮೈತ್ರಿ ಸಂಬಂಧ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ಈ ಹಿನ್ನೆಲೆ ಸಚಿವ ಆರ್.ಅಶೋಕ್ ಹೆಚ್‌ಡಿಕೆ ಜೊತೆ ಮಾತುಕತೆ ಕುತೂಹಲ ಮೂಡಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img