Sunday, September 19, 2021
Homeಸುದ್ದಿ ಜಾಲಟಾಲಿವುಡ್‌ ನಟ ಸಾಯಿ ಧರಂ ತೇಜ್‌ ಆರೋಗ್ಯ ಸ್ಥಿರ

ಇದೀಗ ಬಂದ ಸುದ್ದಿ

ಟಾಲಿವುಡ್‌ ನಟ ಸಾಯಿ ಧರಂ ತೇಜ್‌ ಆರೋಗ್ಯ ಸ್ಥಿರ

ಹೈದರಾಬಾದ್‌ : ಟಾಲಿವುಡ್‌ ಮೆಗಾ ಹೀರೊ ಸಾಯಿ ಧರಂ ತೇಜ್ ಹೈದರಾಬಾದ್‌ನ ಕೇಬಲ್‌ ಬ್ರಿಡ್ಜ್‌ ಮೇಲೆ ಜರುಗಿದ ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಪೋರ್ಟ್ಸ್ ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿರುವ ತೇಜ್‌ ಅವರನ್ನು ಮಾದಾಪುರದ ಮೆಡಿಕಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರ್ಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ನಟನ ಕತ್ತಿನ ಮೂಳೆಗೆ ಪೆಟ್ಟಾಗಿದೆ.

ಸದ್ಯಕ್ಕೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಹಾಗೂ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಮೌಲ್ಯಮಾಪನವನ್ನು ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತದ ಕುರಿತು ರಾಯದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img