Wednesday, September 22, 2021
Homeರಾಜಕೀಯಅಫ್ಘಾನಿಸ್ತಾನ​ ಕುರಿತು ಭಾರತ-ಆಸ್ಟ್ರೇಲಿಯಾ ಚರ್ಚೆ

ಇದೀಗ ಬಂದ ಸುದ್ದಿ

ಅಫ್ಘಾನಿಸ್ತಾನ​ ಕುರಿತು ಭಾರತ-ಆಸ್ಟ್ರೇಲಿಯಾ ಚರ್ಚೆ

ನವದೆಹಲಿ: ಅಫ್ಘಾನಿಸ್ತಾನವು ತನ್ನ ನೆಲವನ್ನು ಭಯೋತ್ಪಾದನೆಗೆ ಬಳಸಲು ಅನುಮತಿಸಬಾರದು ಮತ್ತು ಮತ್ತೊಮ್ಮೆ ಭಯೋತ್ಪಾದಕತೆ ಬೆಳೆಸುವ ಸ್ವರ್ಗವಾಗಿ ಅಫ್ಘಾನಿಸ್ತಾನ ಮಾರ್ಪಾಡಾಗಬಾರದು ಎಂದು ಭಾರತ ಮತ್ತು ಆಸ್ಟ್ರೇಲಿಯಾ ಪ್ರತಿಪಾದಿಸಿವೆ.

ಭಾರತ-ಆಸ್ಟ್ರೇಲಿಯಾ ನಡುವಿನ 2+2 ಸಂವಾದದಲ್ಲಿ ತಾಲಿಬಾನ್ ಕುರಿತಂತೆ ಚರ್ಚೆ ನಡೆಸಲಾಯಿತು. ಉಭಯ ದೇಶಗಳ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಎರಡೂ ದೇಶಗಳ ಅಭಿವೃದ್ಧಿಗೆ ಕೆಲಸ ಮಾಡುವುದಾಗಿ ಪ್ರತಿಜ್ಞೆ ಕೈಗೊಂಡರು.

ಅಮೆರಿಕದ ಅವಳಿ ಗೋಪುರಗಳ ಮೇಲೆ ಭಯೋತ್ಪಾದಕರ ದಾಳಿ ನಡೆದು 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಎರಡೂ ರಾಷ್ಟ್ರಗಳು ಯಾವುದೇ ರಾಜಿ ಇಲ್ಲದೇ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಭಯೋತ್ಪಾದನೆ ವಿರುದ್ಧ ಸಮರ ಸಾರಲು ನಿರ್ಧರಿಸಿದವು.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಜತ್ ಸಿಂಗ್ ತಮ್ಮ ಆಸ್ಟ್ರೇಲಿಯಾದ ಮರಿಸ್ ಪೇನ್ ಮತ್ತು ಪೀಟರ್ ಡಟನ್ ಅವರೊಂದಿಗೆ ತುಂಬಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img