Sunday, September 19, 2021
Homeಸುದ್ದಿ ಜಾಲಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ

ಇದೀಗ ಬಂದ ಸುದ್ದಿ

ಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ

ಮಂಗಳೂರು: ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸೆ.15ರಂದು ಬೆಂಗಳೂರಿನ ಸೈಂಟ್ ಪೆಟ್ರಿಕ್ ಚರ್ಚ್​​ನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ರಮಾನಾಥ ರೈ ಹೇಳಿದರು.

ನಾಳೆ ಬೆಳಗ್ಗೆ 9.30ಗೆ ಉಡುಪಿ‌ ಚರ್ಚ್​ನಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. 10.30ಕ್ಕೆ ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಮಧ್ಯಾಹ್ನ 2.30-5.30 ವರೆಗೆ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಮತ್ತೆ ಫಾದರ್ ಮುಲ್ಲರ್ ಶವಾಗಾರಕ್ಕೆ ರವಾನೆ ಮಾಡಲಾಗುತ್ತದೆ.

ಸೆ.15 ರಂದು ಬೆಳಗ್ಗೆ 10.30ಗಂಟೆಗೆ ಮಿಲಾಗ್ರಿಸ್ ಚರ್ಚ್​ನಲ್ಲಿ‌ ಪೂಜೆ ನಡೆಸಿ ಬಳಿಕ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ‌ಬಳಿಕ ಬೆಂಗಳೂರಿನ ಸಂತ ಪೆಟ್ರಿಕ್ ಚರ್ಚ್​ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ರಮಾನಾಥ್​ ರೈ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img