Sunday, September 19, 2021
Homeಸುದ್ದಿ ಜಾಲಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ

ಇದೀಗ ಬಂದ ಸುದ್ದಿ

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ

ಬೆಂಗಳೂರು,ಸೆ.14- ಕೇಂದ್ರ ಮತ್ತು ರಾಜ್ಯದ ನಡುವೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರು ಕೊಂಡಿಯಾಗಿ ಕೆಲಸ ಮಾಡಿದ್ದರು. ಅವರನ್ನು ಕಳೆದುಕೊಂಡಿರುವುದು ನಮಗೆ ಅತೀವ ದುಃಖ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬನಿ ಮಿಡಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದಿದ್ದ ಆಸ್ಕರ್ ಫರ್ನಾಂಡೀಸ್ ಅವರು ನಂಬಿದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ಆದ್ದರಿಂದಲೇ ಅವರು ಬಹುದೊಡ್ಡ ನಾಯಕರಾಗಿ ಹೊರ ಹೊಮ್ಮಿದರು ಎಂದು ಪ್ರಶಂಸಿಸಿದರು.

ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ಪಡೆದು ರಾಜ್ಯದಲ್ಲಿ ಕೆಲವು ಯೋಜನೆಗಳನ್ನು ಜಾರಿಗೆ ತರುವಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ, ಕನ್ನಡದ ನೆಲ, ಜಲ, ಭಾಷೆ ಸೇರಿದಂತೆ ಯಾವುದೇ ವಿಷಯಗಳಲ್ಲೂ ಕರ್ನಾಟಕಕ್ಕೆ ಅನ್ಯಾಯವಾದಾಗ ಮುಂಚೂಣಿಯಲ್ಲಿ ಇರುತ್ತಿದ್ದರು ಎಂದು ಸ್ಮರಿಸಿದರು.

ಸರಳ, ಸಜ್ಜನಿಕೆ, ಪ್ರಾಮಾಣಿಕತೆ, ಸಂಘಟನೆಗೆ ಹೆಸರಾಗಿದ್ದ ಫರ್ನಾಂಡೀಸ್ ನಂಬಿದ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ. ಅನೇಕ ಪ್ರಭಾವಿ ನಾಯಕರ ಜತೆ ಕೆಲಸ ಮಾಡಿದ ಅನುಭವಿಗಳಾಗಿದ್ದರು. ಆದರೂ, ಅವರ ಸರಳತೆ ಎಲ್ಲರಿಗೂ ಇಷ್ಟವಾಗುತ್ತಿತ್ತು ಎಂದು ಗುಣಗಾನ ಮಾಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img