Wednesday, September 22, 2021
Homeಸುದ್ದಿ ಜಾಲರಾಜ್ಯದಲ್ಲಿ 1-5ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಹತ್ವ ಮಾಹಿತಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 1-5ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಹತ್ವ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಈಗಾಗ್ಲೇ 6 ರಿಂದ 12ನೇ ತರಗತಿವರೆಗೆ ಶಾಲೆಗಳು ಆಂಭವಾಗಿವೆ. ಅದ್ರಂತೆ, ಸಧ್ಯದಲ್ಲೇ 1 ರಿಂದ 5ನೇ ತರಗತಿಗಳು ಪ್ರಾರಂಭವಾಗುತ್ವೆ ಎಂದು ಹೇಳಲಾಗ್ತಿತ್ತು. ಆದ್ರೆ, ಸಧ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಈ ಗೊಂದಲಕ್ಕೆ ತೆರೆ ಎಳೆದಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭದ ಕುರಿತು ಇನ್ನೂ ನಿರ್ಧರಿಸಿಲ್ಲ’ ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ‘ 1 ರಿಂದ 5ನೇ ತರಗತಿ ಶಾಲೆ ಆರಂಭದ ಕುರಿತು ಇನ್ನೂ ನಿರ್ಧರಿಸಿಲ್ಲ. ಸದನ ಮುಗಿಯುವವರೆಗೆ ಯಾವುದೇ ನಿರ್ಮಾನ ಮಾಡಲ್ಲ. ಇನ್ನು ಈ ಕುರಿತು ಯಾವುದೇ ಸಭೆಯೂ ಕೂಡ ನಡೆಸಿಲ್ಲ’ ಎಂದರು.

‘ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಮಕ್ಕಳ ಮೇಲೆ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚಿಸ್ತಿದೆ. ಟಾಸ್ಕ್‌ ಫೋರ್ಸ್‌ ಸಹ ಗಂಭೀರವಾಗಿ ಅಧ್ಯಯನ ಮಾಡ್ತಿದೆ. ಹಾಗಾಗಿ ಸಧ್ಯಕ್ಕೆ 1 ರಿಂದ 5ನೇ ತರಗತಿ ಶಾಲೆ ಓಪನ್‌ ಬಗ್ಗೆ ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img