Sunday, September 19, 2021
Homeಸುದ್ದಿ ಜಾಲಧಾರಾಕಾರ ಮಳೆಗೆ ಗುಜರಾತ್ ತತ್ತರ

ಇದೀಗ ಬಂದ ಸುದ್ದಿ

ಧಾರಾಕಾರ ಮಳೆಗೆ ಗುಜರಾತ್ ತತ್ತರ

ರಾಜ್‌ಕೋಟ್ (ಗುಜರಾತ್): ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನೆರೆಯಲ್ಲಿ ಸಿಲುಕಿದ್ದ 1,400 ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್​ಕೋಟ್​ನ ಮುನ್ಸಿಪಲ್ ಕಾರ್ಪೋರೇಷನ್ ಆಯುಕ್ತ ಅಮಿತ್ ಅರೋರಾ, NDRF ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈವರೆಗೆ 1,400 ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಿದ್ದು, ಪ್ರವಾಹದಲ್ಲಿ ಸಿಲುಕಿದ್ದ 335 ಜನರನ್ನು ರಕ್ಷಿಸಲಾಗಿದೆ. ಸದ್ಯ ನೀರಿನ ಮಟ್ಟ ಕಡಿಮೆಯಾಗುತ್ತಿದೆ ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img