Wednesday, September 22, 2021
Homeರಾಜಕೀಯಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ : ಸಿಎಂ

ಇದೀಗ ಬಂದ ಸುದ್ದಿ

ಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ : ಸಿಎಂ

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಕೊರಟಗೆರೆ ಶಾಸಕ, ಮಾಜಿ ಸಚಿವ ಡಾ. ಜಿ ಪರಮೇಶ್ವರ್ ಅವರು ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಈ ವೇಳೆ ಅವರಿಗೆ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ಸಿಎಂ ತಿಳಿಸಿದರು.

ಇತ್ತೀಚೆಗೆ ತಾವು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿಕೊಟ್ಟು, ಭೂಸ್ವಾಧೀನವೂ ಸೇರಿದಂತೆ ಯೋಜನೆಯ ಅಡ್ಡಿ-ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮಕೈಗೊಳ್ಳುವ ಪ್ರಯತ್ನ ಮಾಡಿದ್ದೇವೆ. ಇದರ ಫಲವಾಗಿ ಎರಡು ಬಹುದೊಡ್ಡ ಅಡೆತಡೆಗಳು ನಿವಾರಣೆಯಾಗಿವೆ. ಒಂದೆರಡು ತಿಂಗಳಲ್ಲಿ ಎತ್ತಿನಹೊಳೆಯಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತರಾಗಿದ್ದೇವೆ. ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img