Sunday, September 19, 2021
Homeರಾಜಕೀಯಸೆಪ್ಟೆಂಬರ್ 24 ಮೋದಿ ಅಮೆರಿಕ ತೆರಳುವ ಸಾಧ್ಯತೆ

ಇದೀಗ ಬಂದ ಸುದ್ದಿ

ಸೆಪ್ಟೆಂಬರ್ 24 ಮೋದಿ ಅಮೆರಿಕ ತೆರಳುವ ಸಾಧ್ಯತೆ

ವಾಷಿಂಗ್ಟನ್(ಅಮೆರಿಕ): ಸೆಪ್ಟೆಂಬರ್ 24ರಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಕ್ವಾಡ್ ನಾಯಕರ ಸಭೆ ಆಯೋಜಿಸಿದ್ದಾರೆ ಎಂದು ಶ್ವೇತಭವನ ಮಾಹಿತಿ ನೀಡಿದೆ. ಈ ಸಭೆಯಲ್ಲಿ ಕ್ವಾಡ್ ಸದಸ್ಯ ರಾಷ್ಟ್ರಗಳಾದ ಭಾರತ, ಆಸ್ಟ್ರೇಲಿಯಾ, ಜಪಾನ್​ ಮತ್ತು ಅಮೆರಿಕದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.

ಅಧ್ಯಕ್ಷ ಬೈಡನ್ ಅವರು ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ ಎಂದು ಶ್ವೇತಭವನ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಭೆಯಲ್ಲಿ ಕೋವಿಡ್ ವಿರುದ್ಧ ಹೋರಾಟ, ಹವಾಮಾನ ಬಿಕ್ಕಟ್ಟು, ತಂತ್ರಜ್ಞಾನ, ಸೈಬರ್‌ಸ್ಪೇಸ್‌ ಪಾಲುದಾರಿಕೆ ಹಾಗೂ ವಿಶೇಷವಾಗಿ ಇಂಡೋ – ಪೆಸಿಫಿಕ್ ಪ್ರದೇಶದ ಕುರಿತು ಈ ನಾಲ್ಕೂ ದೇಶಗಳ ನಾಯಕರು ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 24ಕ್ಕೆ ಅಮೆರಿಕಕ್ಕೆ ತೆರಳುವ ಸಾಧ್ಯತೆಯಿದೆ. ಈಗಾಗಲೇ ಜಪಾನ್​ನ ಪ್ರಧಾನಿ ಯೋಶಿಹಿಡೆ ಸುಗಾ ಕ್ವಾಡ್ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಪಾನ್​ ಮಾಧ್ಯಮಗಳು ವರದಿ ಮಾಡಿವೆ.

ಕ್ವಾಡ್ ಸಮೂಹವನ್ನು ಮತ್ತಷ್ಟು ಬಲಪಡಿಸಲು ಬೈಡನ್ – ಹ್ಯಾರಿಸ್ ಸರ್ಕಾರವು ನಿರ್ಧರಿಸಿದೆ. 21ನೇ ಶತಮಾನದ ಸಮಸ್ಯೆಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ಇಂಡ ಪೆಸಿಫಿಕ್ ವಲಯದ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಅಮೆರಿಕ ಹೇಳಿ ಕೊಂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img