Sunday, September 19, 2021
Homeದಕ್ಷಿಣ ಕನ್ನಡಮಂಗಳೂರುನಿಫಾ ವೈರಸ್ ಶಂಕೆ:ಪರೀಕ್ಷೆ ಮಾಡಿಸಿಕೊಂಡ ವ್ಯಕ್ತಿ

ಇದೀಗ ಬಂದ ಸುದ್ದಿ

ನಿಫಾ ವೈರಸ್ ಶಂಕೆ:ಪರೀಕ್ಷೆ ಮಾಡಿಸಿಕೊಂಡ ವ್ಯಕ್ತಿ

ಮಂಗಳೂರು: ನಿಫಾ ವೈರಸ್​ ಶಂಕೆ ಹಿನ್ನೆಲೆ ಗೋವಾ ಮೂಲದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ನಾಳೆಯೊಳಗೆ ವರದಿ ಬರುವ ಸಾಧ್ಯತೆಯಿದೆ. ನೆರೆಯ ರಾಜ್ಯ ಕೇರಳದಲ್ಲಿ ಭಾರಿ ಆತಂಕ ಮೂಡಿಸಿರುವ ನಿಫಾ, ರಾಜ್ಯಕ್ಕೂ ಕಾಲಿಟ್ಟಿದೆಯಾ ಅನ್ನೋ ಅನುಮಾನ ಕಾಡುತ್ತಿದೆ.

ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಲ್ಯಾಬ್​ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖನಾಗಿದ್ದ ಈತ, ನಿಫಾ ವೈರಸ್​ ಬಂದಿರಬಹುದೆಂಬ ಶಂಕೆ ಹಿನ್ನೆಲೆ ಟೆಸ್ಟ್ ಮಾಡಿಸಿದ್ದಾನೆ.

ಈತ ಗೋವಾದಿಂದ ಕಾರವಾರಕ್ಕೆ ಬಂದು, ಅಲ್ಲಿಂದ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಮಂಗಳೂರಿಗೆ ಬಂದಿದ್ದಾನೆ. ಈತನ ಮಾದರಿ ಪಡೆದಿರುವ ಆರೋಗ್ಯ ಇಲಾಖೆ ಪರೀಕ್ಷೆಗೆ ಕಳಿಸಿದ್ದು, ಇಂದು ಅಥವಾ ನಾಳೆ ರಿಪೋರ್ಟ್ ಬರಲಿದೆ. ಆತನನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img