Sunday, September 19, 2021
Homeಸುದ್ದಿ ಜಾಲಆಸ್ಕರ್‌ ಫರ್ನಾಂಡಿಸ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ಇದೀಗ ಬಂದ ಸುದ್ದಿ

ಆಸ್ಕರ್‌ ಫರ್ನಾಂಡಿಸ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಿಗ್ಗೆ ಉಡುಪಿಯ ಶೋಕಮಾತಾ ಚರ್ಚ್‌ಗೆ ತರಲಾಯಿತು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಶಾಸಕ ಯು.ಟಿ.ಖಾದರ್, ಮುಖಂಡರಾದ ಮೊಯಿದ್ದೀನ್ ಭಾವ, ಜೆ.ಆರ್.ಲೊಬೊ, ಮಂಜುನಾಥ ಭಂಡಾರಿ ಸೇರಿದಂತೆ ಹಲವು ಗಣ್ಯರು ಚರ್ಚ್‌ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಉಡುಪಿ ಧರ್ಮಪ್ರಾಂತ್ಯದ ಗುರುಗಳಾದ ಜೆರಾಲ್ಡ್ ಐಸಾಕ್ ಲೋಬೋ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img