Sunday, September 19, 2021
Homeಸುದ್ದಿ ಜಾಲಆಸ್ಕರ್ ಫರ್ನಾಂಡಿಸ್ ವಿಧಿವಶ: ಉಡುಪಿಯಲ್ಲಿ ಅಂತಿಮ ದರ್ಶನ

ಇದೀಗ ಬಂದ ಸುದ್ದಿ

ಆಸ್ಕರ್ ಫರ್ನಾಂಡಿಸ್ ವಿಧಿವಶ: ಉಡುಪಿಯಲ್ಲಿ ಅಂತಿಮ ದರ್ಶನ

ಉಡುಪಿ: ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಸೆ.13ರಂದು ವಿಧಿವಶರಾಗಿದ್ದರು. ಅವರ ಮೃತದೇಹವನ್ನು ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್​ಗೆ ಕರೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.

ಚರ್ಚ್​ನಲ್ಲಿ ಧಾರ್ಮಿಕ ವಿಧಿ-ವಿಧಾನಗಳನ್ನು ಧರ್ಮಗುರುಗಳು ನೆರವೇರಿಸಲಿದ್ದು, ಸುಮಾರು ಒಂದು ಗಂಟೆಗಳ ಕಾಲ ಪ್ರಾರ್ಥನೆ ಪೂಜೆ ನಡೆಯಲಿದೆ. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ. ಚರ್ಚ್ ಫಾದರ್ ಚಾರ್ಲ್ಸ್ ಮಿನೇಜಸ್ ಧಾರ್ಮಿಕ ವಿಧಿ – ವಿಧಾನಗಳನ್ನು ನಡೆಸಿಕೊಡಲಿದ್ದಾರೆ. ಇನ್ನು ಜಿಲ್ಲೆಯ ಕೆಲ ಗಣ್ಯರು ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ 11 ಗಂಟೆ ಸುಮಾರಿಗೆ ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಆಸ್ಕರ್ ಫರ್ನಾಂಡಿಸ್ ಮೃತದೇಹವನ್ನು ರವಾನೆ ಮಾಡಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮಧ್ಯಾಹ್ನ 1.30 ರವರೆಗೆ ಅಂತಿಮ ದರ್ಶನ ವ್ಯವಸ್ಥೆ ಇದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img