Wednesday, September 22, 2021
Homeಕೋವಿಡ್-19ದೇಶದಲ್ಲಿ ಕೋವಿಡ್ ಪ್ರಕರಣಗಳ ಗಣನೀಯ ಇಳಿಕೆ

ಇದೀಗ ಬಂದ ಸುದ್ದಿ

ದೇಶದಲ್ಲಿ ಕೋವಿಡ್ ಪ್ರಕರಣಗಳ ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸದಾಗಿ 25,404 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನ ಸಂಖ್ಯೆ 3,32,89,579 ಕ್ಕೇರಿದೆ.

ನಿನ್ನೆ 339 ಸೋಂಕಿತರು ಮೃತಪಟ್ಟಿದ್ದು, ಈವರೆಗೆ ವೈರಸ್​ಗೆ 4,43,213 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 37,127 ಮಂದಿ ಗುಣಮುಖರಾಗಿದ್ದು, ಒಟ್ಟಾರೆ 3,24,84,159 ಜನರು ಚೇತರಿಸಿಕೊಂಡಿದ್ದಾರೆ. ಸೆಪ್ಟೆಂಬರ್​ 13ರಂದು 78,66,950 ಕೋವಿಡ್​ ಲಸಿಕಾ ಡೋಸ್​ಗಳನ್ನು ನೀಡಲಾಗಿದ್ದು, ಒಟ್ಟಾರೆ 75,22,38,324 ವ್ಯಾಕ್ಸಿನ್ ಡೋಸ್​ಗಳನ್ನು ಹಾಕಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img