Sunday, September 19, 2021
Homeಸುದ್ದಿ ಜಾಲ2021-22ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

2021-22ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ 2021-22ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಮೈಕ್ರೋ ಕ್ರೆಡಿಟ್, ಭೂ ಒಡೆತನ, ಉದ್ಯಮಶೀಲತಾ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ httpps://kbdc.karnataka.gov.in, ಮೂಲಕ ಅಗತ್ಯ ದಾಖಲೆಗಳೊಂದಿಗೆ ಅಪ್ಲೋಡ್ ಮಾಡಬಹುದು. ಅರ್ಜಿಗಳನ್ನು ಇದೇ ಲಿಂಕ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳೊಂದಿಗೆ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲೂ ಸಲ್ಲಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ಬ್ಲಾಕ್, ಶಿವಮೊಗ್ಗ, ದೂ.ಸಂ.: 08182-224349 ನ್ನು ಸಂಪರ್ಕಿಸುವುದು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img