Sunday, September 19, 2021
Homeಜಿಲ್ಲೆಗದಗಗದಗದ ಕಲಕೇರಿಯಲ್ಲಿ ಭೂಕಂಪ, ಗಾಬರಿಗೊಂಡು ಜನ

ಇದೀಗ ಬಂದ ಸುದ್ದಿ

ಗದಗದ ಕಲಕೇರಿಯಲ್ಲಿ ಭೂಕಂಪ, ಗಾಬರಿಗೊಂಡು ಜನ

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ, ವಿರೂಪಾಪುರ ತಾಂಡಾ ಸುತ್ತ ಮುತ್ತ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಇದರಿಂದ ಜನ ಕೆಲಕಾಲ ಭಯದಿಂದಾಗಿ ಮನೆ ಬಿಟ್ಟು ಹೊರಗೆ ಬಂದಿದ್ದಾರೆ.

ರಾತ್ರಿ 8-24ರ ಸುಮಾರಿಗೆ 2-3 ಸೆಕೆಂಡ್‌ಗಳಷ್ಟು ಕಾಲ ಭೂಮಿ ಕಂಪಿಸಿದ ಅನುಭವ ತಾಂಡಾದ ಜನರಿಗೆ ಉಂಟಾಗಿದ್ದು, ಮನೆಯ ಗೃಹಪಯೋಗಿ ವಸ್ತುಗಳು ಅಲುಗಾಡಿವೆ. ಘಟನೆಯಿಂದ ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಈ ಲಘು ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಆದರೆೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದರೂ ಸಹ ಘಟನಾ ಸ್ಥಳಕ್ಕೆ ಬಂದಿಲ್ಲಾ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img