Wednesday, September 22, 2021
Homeಸುದ್ದಿ ಜಾಲಐಟಿಐ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಐಟಿಐ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ

ಬೆಂಗಳೂರು, ಸೆ. 14: ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಐಟಿಐ ಕಲಿತರೆ ಉದ್ಯೋಗ ಖಾತರಿ ಎನ್ನುವಂತಹ ಪರಿಸ್ಥಿತಿಯಿದೆ. ಅದಕ್ಕೆ ತಕ್ಕೆಂತ ಐಟಿಐ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದಿಲ್ಲೊಂದು ಕಡೆಗೆ ಉದ್ಯೋಗ ಖಾತ್ರಿಯಾಗಿ ಸಿಗುತ್ತಿದೆ.

ಜೊತೆಗೆ ಐಟಿಐ ತರಬೇಟಿ ಸಂಸ್ಥೆಗಳನ್ನು ಉನ್ನತ ದರ್ಜೆಗೆ ಏರಿಸಲು ಸರ್ಕಾರ ಕೂಡ ಕ್ರಮ ಕೈಗೊಳ್ಳುತ್ತಿದೆ.

ಇದರೊಂದಿಗೆ ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಬೇಡಿಕೆಗಳನ್ನು ಗಮನದಲ್ಲಿರಿಸಿಕೊಂಡು 6 ಹೊಸ ಕೋರ್ಸ್‌ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಮಂಗಳವಾರ ಅನುಮೋದನೆ ನೀಡಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ನಿರ್ಣಯವು ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗುತ್ತದೆ. ಈ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಐಟಿಐ ಕಲಿಯಲು ವಿದ್ಯಾರ್ಥಿಗಳು ಮುಂದೆ ಬರುತ್ತಿದ್ದಾರೆ. ಐಟಿಐನಿಂದ ಸ್ವದ್ಯೋಗವನ್ನೂ ಮಾಡಬಹುದು. ಜೊತೆಗೆ ಕೈಗಾರಿಕೆಗಳಲ್ಲಿಯೂ ಉದಗಯೋಗಕ್ಕೆ ಅವಕಾಶವಿದೆ. ಹೀಗಾಗಿ ಕೈಗಾರಿಕೆಯಲ್ಲಿ ಉಸ್ಯೋಗಕ್ಕೆ ಅನುಕೂಲವಾಗುವಂತೆ ಹೊಸದಾಗಿ ಆರು ಕೋರ್ಸ್‌ಗಳನ್ನು ಸೇರಿಸಲಾಗಿದೆ. ಆ ಮೂಲಕ ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಹೊಸ ಭರವಸೆಯನ್ನು ಉನ್ನತ ಶಿಕ್ಷಣ ಇಲಾಖೆ ಕೊಟ್ಟಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img